Gram Panchayat Library Supervisor Recruitment 2022 – Belagavi District - Apply Online

 Belagavi District Gram Panchayat Library Supervisor Recruitment 2022 : 

ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.



Gram Panchayat Library Supervisor Recruitment 2022: Details of Job 

Belagavi District

ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು


ಕರ್ತವ್ಯ ಸ್ಥಳ : ಚಿಕ್ಕೋಡಿ ತಾಲೂಕಿನ ಅಂಕಲಿ, ಬೆಳಗಾವಿ ತಾಲೂಕಿನ ಹಲಗಾ, ಸುಳೇಭಾವಿ, ಹೊಸವಂಟಮೂರಿ, ಅಥಣಿ ತಾಲೂಕಿನ ಹಲ್ಯಾಳ, ಮಂಗಸೂಳಿ, ನಾಗನೂರ ಪಿ.ಕೆ., ಸಪ್ತಸಾಗರ, ಹುಕ್ಕೇರಿ ತಾಲೂಕಿನ ಹೆಬ್ಬಾಳ, ಹೊಸುರ, ಸವದತ್ತಿ ತಾಲೂಕಿನ ಚುಳಕಿ, ಖಾನಾಪುರ ತಾಲೂಕಿನ ಕರಂಬಳ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.


ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.


ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ಗೌರವ ಸಂಭಾವನೆ ನೀಡಲಾಗುವುದು.

ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಕಡ್ಡಾಯವಾಗಿ ತಹಶೀಲ್ದಾರವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ ಲಗತ್ತಿಸಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 19, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 19, 2022

Belagavi District Gram Panchayat Library Supervisor Recruitment 2022: Important Links


Click here for the Notification



ಹೆಚ್ಚಿನ ಮಾಹಿತಿಗಾಗಿ “ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಬೆಳಗಾವಿ” ದೂರವಾಣಿ ಸಂಖ್ಯೆ : 0831 2424231 ಸಂಪರ್ಕಿಸಬಹುದು.

Post a Comment

Previous Post Next Post