Karnataka central cooperative Bank Dharwad Recruitment 2022 – Apply for 52 Attenders Post

 KCC Bank Dharwad/ Hubli Recruitment 2022: 

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಧಾರವಾಡದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ

KCC Bank Dharwad Recruitment 2022: Details about the Job openings





ಹುದ್ದೆ : ಸಿಪಾಯಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಧಾರವಾಡದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 52 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.


ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,500 – ರೂ. 24,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆಯಲ್ಲಿ (ಎಸ್.ಎಸ್.ಎಲ್.ಸಿ) ಪಡೆದ ಅಂಕಗಳನ್ನು ಪರಿಗಣಿಸಿ, ಅಂಕಗಳ ಶೇಕಡಾವಾರು ಮೆರಿಟ್ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು, ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಶೇಕಡಾ 85ಕ್ಕಿಳಿಸಿ ಉಳಿದ ಪ್ರತಿಶತ 15 ಅಂಕಗಳನ್ನು ಸಂದರ್ಶನಕ್ಕೆ ನೀಡಲಾಗುವುದು. ಸದರಿ ಅಂಕಗಳನ್ನು ಒಟ್ಟು ಸೇರಿಸಿ ರ್ಯಾಂಕಿಂಗ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಜಿಲ್ಲಾ ಹಾಲು ಒಕ್ಕೂಟದಲ್ಲಿ ನೇರ ನೇಮಕಾತಿ 2022

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಹಾಗೂ ಅರ್ಜಿ ಶುಲ್ಕದ ಡಿ.ಡಿ.ಯನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಹಾಜರಾಗಿ ಅಥವಾ ರೆಜಿಸ್ಟರ್ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೆ.ಸಿ.ಸಿ ಬ್ಯಾಂಕ್ ಲಿ., ಪ್ರಧಾನ ಕಛೇರಿ, ಸುಭಾಸ ರೋಡ, ಧಾರವಾಡ – 580001

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು :
1) ಎಸ್.ಎಸ್.ಎಲ್.ಸಿ ಅಂಕ ಪಟ್ಟಿ
2) ಸ್ವ ಹಸ್ತಾಕ್ಷರವಿರುವ ಇತ್ತೀಚಿನ 3 ಭಾವಚಿತ್ರ
3) ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ಮತ್ತು ಗ್ರಾಮೀಣ ಅಭ್ಯರ್ಥಿ/ ಕನ್ನಡ ಮಾಧ್ಯಮ/ ಮಾಜಿ ಸೈನಿಕ ಅಭ್ಯರ್ಥಿ/ ಅಂಗವಿಕಲ ಅಭ್ಯರ್ಥಿ ಮೀಸಲಾತಿ ಸೌಲಭ್ಯ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸರ್ಕಾರ ನಿಗದಿಪಡಿಸಿದ ನಮೂನೆಯಲ್ಲಿ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದ ಚಾಲ್ತಿ ಇರುವ ಪ್ರಮಾಣ ಪತ್ರಗಳ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು ಮತ್ತು ಮೂಲ ಪ್ರತಿಗಳನ್ನು ಸಂದರ್ಶನ / ಪರಿಶೀಲನೆ ಕಾಲಕ್ಕೆ ಸಲ್ಲಿಸತಕ್ಕದ್ದು.
4) ಅಭ್ಯರ್ಥಿಗಳು ತಮ್ಮ ವಿಳಾಸ ಸಮರ್ಥಿಸಲು ಅಗತ್ಯ ದಾಖಲಾತಿ ಸಲ್ಲಿಸಬೇಕು. (ಆಧಾರ್ ಕಾರ್ಡ್/ ವೋಟರ್ ಐಡಿ/ ಪ್ಯಾನ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್)
( ಈ ಎಲ್ಲಾ ದಾಖಲಾತಿಗಳನ್ನು ಗೆಜೆಟೇಡ್ ಅಧಿಕಾರಿಯಿಂದ ದೃಢೀಕರಿಸಿ ಪ್ರತಿಯನ್ನು ಲಗತ್ತಿಸಬೇಕು)

ನಿಗದಿತ ಅರ್ಜಿ ಶುಲ್ಕದ ವಿವರ : ಭರ್ತಿಗೊಳಸಿದ ಅರ್ಜಿಯ ಜೊತೆಯಲ್ಲಿ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 500 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಅಂಗವಿಕಲ/ಮಾಜಿ ಸೈನಿಕ/ ವಿಧವಾ ಅಭ್ಯರ್ಥಿಗಳು ರೂ. 250 ಮೌಲ್ಯದ ಕ್ರಾಸ ಮಾಡಿದ ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಅನ್ನು “ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಕೆ.ಸಿ.ಸಿ ಬ್ಯಾಂಕ್ ಲಿ.,ಧಾರವಾಡ” ಈ ಹೆಸರಿನಲ್ಲಿ ಪಡೆದು ಸಲ್ಲಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 29, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 19, 2022

KCC Bank Dharwad Recruitment 2022: Important Links

Click Here to see the Notice


Post a Comment

Previous Post Next Post