Karnataka Police Recruitment 2022 | 12000-KSP Upcoming Vacancy-Constable, SI , Notification, Apply Online

Karnataka Police Recruitment 2022 Details

ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆ.ಎಸ್.ಐ.ಎಸ್.ಎಫ್) ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.



KSP Recruitment 2022 : Details of Vacancies

ಹುದ್ದೆ : ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್) (ಪುರುಷ & ಮಹಿಳಾ ಹಾಗೂ ತೃತೀಯ ಲಿಂಗ)


ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.


ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 63 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ


ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,900 ರಿಂದ ರೂ. 70,850 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.


ವಯೋಮಾನ : ದಿನಾಂಕ 03 ಮಾರ್ಚ್, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ ನಿಗದಿಪಡಿಸಲಾಗಿದೆ.


ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಯು.ಜಿ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 03.03.2022ಕ್ಕೆ ಹೊಂದಿರಬೇಕು.


ಆಯ್ಕೆ ವಿಧಾನ : ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.


ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್) ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :

• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

• ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.


ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 500

• ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 250


ಶುಲ್ಕ ಪಾವತಿಸುವ ವಿಧಾನ : ನಿಗದಿತ ಶುಲ್ಕವನ್ನು ನಗದು ಅಥವಾ ಆನ್‌ಲೈನ್‌ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು


ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರವರಿ 10, 2022

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 03, 2022

ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 05, 2022


KSP Recruitment 2022: Important Links


Click Here for Notification


Click Here to Apply

Post a Comment

Previous Post Next Post