WCD Vijayapura Anganwadi Recruitment 2022 – Apply Online for 171 Anganwadi Teacher And Helper Post

 WCD Vijayapura Anganwadi Recruitment 2022

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿಜಯಪುರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Applications have been invited from the Department of Women and Child Development at the Anganwadi Centers in Vijayapur district to fill the vacancies of activist and maid. Read the full list of recruitment, place of duty, educational qualification, age, and other details in the recruitment below.



ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ


ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 171 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ15
ಅಂಗನವಾಡಿ ಸಹಾಯಕಿ156

ಕರ್ತವ್ಯ ಸ್ಥಳ : ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸಬೇಕು.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ.
• ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ಉತ್ತೀರ್ಣ, ಗರಿಷ್ಠ 9ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. 9ನೇ ತರಗತಿ ಉತ್ತೀರ್ಣತೆ ಹೊಂದಿ ಹೆಚ್ಚಿನ ವಿದ್ಯಾರ್ಹತೆಯನ್ನು ಪಡೆದಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆದರೆ ಆಯ್ಕೆ ಸಮಯದಲ್ಲಿ 9ನೇ ತರಗತಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು.

ವಯೋಮಾನ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ಹೊಂದಿರಬೇಕು.

ವಯೋಮಿತಿ ಸಡಿಲಿಕೆ : ಕಾರ್ಯಕರ್ತೆ ಹುದ್ದೆಗೆ ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಆನ್‌ಲೈನ್‌ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :

  1. ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ.
  2. ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
  3. ತಹಶೀಲ್ದಾರರು/ ಉಪತಹಸೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
  4. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
  5. ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 03, 2022

Applications for Recruitment of Anganwadi Worker / Helper



ಇತರೆ ಮಾಹಿತಿ : ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು.

Post a Comment

Previous Post Next Post