ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು:
1. ಅರ್ಜಿ ನಿಗದಿತ ನಮೂನೆಯಲ್ಲಿ (ಆನ್‌ಲೈನ್) 2. ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ
3. ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ (ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಅಂಕಪಟ್ಟಿ ನೈಜತೆ ದೃಡೀಕರಣಗೊಂಡಿರಬೇಕು)
4. ಕಡ್ಡಾಯವಾಗಿ ತಹಶೀಲ್ದಾರರು/ಉಪತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
5. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
6. ಪತಿಯ ಮರಣ ಪ್ರಮಾಣ ಪತ್ರ (ವಿಧವಾ ವೇತನ ದೃಢೀಕರಣವನ್ನು ಪರಿಗಣಿಸುವುದಿಲ್ಲ.)
7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪವಿಭಾಗಾಧಿಕಾರಿ/ತಹಶೀಲ್ದಾರ್‌ರವರಿಂದ ಪಡೆದ ಪತ್ರ
8. ಅಂಗವಿಕಲತೆ ಪ್ರಮಾಣ ಪತ್ರ (ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ಪಡೆದಿರಬೇಕು) 9. ವಿಚ್ಛೇದನಾ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
10. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ
ಅಧಿಕಾರಿಗಳಿಂದ ಪ್ರಮಾಣ ಪತ್ರ
11. ಪರಿತ್ಯಕ್ಕೆ ಎಂಬ ಬಗ್ಗೆ ಗ್ರಾಮ ಪಂಚಾಯತ್‌ನಿಂದ ಪಡೆದ ಪ್ರಮಾಣ ಪತ್ರ 12. ಇಲಾಖೆಯ ಸುಧಾರಣಾ ಸಂಸ್ಥೆ/ರಾಜ್ಯ ಮಹಿಳಾ ನಿಲಯಗಳ ನಿವಾಸಿ ಎಂಬ ಬಗ್ಗೆ ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ,
13. ಯೋಜನಾ ನಿರಾಶ್ರಿತರೆಂಬ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
14. ಅರ್ಜಿಯನ್ನು ಕಡ್ಡಾಯವಾಗಿ ಆಯಾ ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯ ಪಂಚಾಯಿತಿ ಕಚೇರಿಗಳಲ್ಲಿನ “ಬಾಪೂಜಿ ಸೇವಾ ಕೇಂದ್ರದಲ್ಲಿಯೇ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಇಂಧೀಕರಿಸಿ ರೂ: 30/- ಪಾವತಿಸಿ